ಮಂಡ್ಯ : ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ನಡೆದಿದೆ.
ಉತ್ತರ ಪ್ರದೇಶ ಮೂಲದ ರಶ್ಮಿ ಎಂಬುವವರಿಗೆ ಬಸ್ ನಲ್ಲಿ ಹೆರಿಗೆಯಾಗಿದೆ.
ಮೈಸೂರಿನ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ, ರಶ್ಮಿ ಮತ್ತು ರಾಜ್ ಕುಮಾರ್ ಕುಟುಂಬವು ನಿನ್ನೆ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವೇಳೆ ಪ್ರಸವ ವೇದನೆ ಉಂಟಾಗಿದೆ.
ಮದ್ದೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಟ್ಟು ನಂತರ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಇದೀಗ ತಾಯಿ, ಮಗು ಆರೋಗ್ಯವಾಗಿದ್ದಾರೆಂದು ವೈದ್ಯರ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ



















