ಮಂಗಳೂರು: ನಗರದಲ್ಲಿನ ಕೋಟೆಕಾರ್ ಬ್ಯಾಂಕ್ ನಲ್ಲಿ ಚಿನ್ನಾಭರಣ, ನಗದು ದರೋಡೆ (Bank Robbery) ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಘಟನೆ ನಡೆದಿದೆ. ಸ್ಥಳ ಮಹಜರು ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಪೊಲೀಸರು ಸೋಮವಾರ ತಮಿಳುನಾಡಿನ ತಿರುವನ್ವೇಲಿ ಹತ್ತಿರ ಆರೋಪಿಗಳನ್ನು ಬಂಧಿಸಿದ್ದರು. ಇಂದು ತಮಿಳುನಾಡಿನಿಂದ ಆರೋಪಿಗಳನ್ನು ಮಂಗಳೂರಿನ ಕೆ.ಸಿ.ರೋಡ್ ಗೆ ಮಹಜರು ಮಾಡಲು ಕರೆತರುತ್ತಿದ್ದರು.
ಮುರುಗನ್ ಡಿ. ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿಯನ್ ಆರೋಪಿಗಳನ್ನು ತಮಿಳುನಾಡಿನ ತಿರುವನ್ವೇಲಿಯಲ್ಲಿ ಬಂಧಿಸಿದ್ದ ಪೊಲೀರು ಇಂದು ರಾಜ್ಯಕ್ಕೆ ಕರೆದುಕೊಂಡು ಬರುತ್ತಿದ್ದರು. ಆದರೆ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿ ಅಲಂಕಾರು ಗುಡ್ಡ ಬಳಿ ಆರೋಪಿ ಕಣ್ಣನ್‌ಮಣಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಇನ್ಸ್‌ಪೆಕ್ಟರ್ ರಫೀಕ್, ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಸೇರಿದಂತೆ ಮೂವರಿಗೆ ಗಾಯಗಳಾಗಿವೆ.