ಮಂಗಳೂರು : ಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದ ಮಲತಂದೆಗೆ ಮಂಗಳೂರಿನ ಎಫ್‌ಟಿಎಸ್‌ಸಿ 2ನೇ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಬಾಲಕಿಯನ್ನು ಆಕೆಯ ಮಲತಂದೆ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಅಂತೆಯೇ ಪೋಲಿಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಆರೋಪಿಯ ಪರ ಹಿರಿಯ ನ್ಯಾಯವಾದಿ ಎಸ್.ಎಸ್.ಖಾಝಿ ವಾದ ಮಂಡಿಸಿದ್ದು,ಇದೀಗ ಆರೋಪಿಗೆ ಜಾಮೀನು ಮಂಜೂರುಗೊಳಿಸುವಂತೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ರಾಯಚೂರಿನಲ್ಲಿ KSRTC ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು


















