ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮಂಗಳೂರಿನ ಕದ್ರಿ ಪಾರ್ಕ್ ರಸ್ತೆ ಅಭಿವೃದ್ಧಿಗೊಂಡಿದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ಸಾವಿರಾರು ಜನರು, ವಾಹನಗಳು ಓಡಾಡುತ್ತಿರುತ್ತವೆ. ಆದರೆ ಇದೀಗ ಈ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಸ್ಮಾರ್ಟ್ ಪಾರ್ಕಿಂಗ್ ಮಾಡಿ ಶುಲ್ಕ ವಿಧಿಸಲು ಸ್ಮಾರ್ಟ್ ಸಿಟಿ ನಿರ್ಧರಿಸಿದೆ. 5 ನಿಮಿಷದ ಒಳಗೆ ವಾಹನ ಪಾಸ್ ಆಗದಿದ್ದಲ್ಲಿ ಶುಲ್ಕ ವಿಧಿಸಲಾಗುತ್ತದೆ.
ಕದ್ರಿ ಪಾರ್ಕ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಅಂಗಡಿಗಳನ್ನು ಖಾಸಗಿ ಸಂಸ್ಥೆಯೊಂದು ಟೆಂಡರ್ ಮೂಲಕ ಪಡೆದುಕೊಂಡಿದೆ. ಇದೇ ಸಂಸ್ಥೆ ಕದ್ರಿ ಪಾರ್ಕ್ನ ಅಂಗಡಿ, ರಸ್ತೆ, ಫುಟ್ಪಾತ್, ಪಾರ್ಕಿಂಗ್ ಜಾಗವನ್ನು ನಿರ್ವಹಣೆ ಮಾಡಲಿದೆ. ಆದರೆ ಟೆಂಡರ್ ಪಡೆದ ಸಂಸ್ಥೆಗೆ ಇದರಿಂದ ನಿರೀಕ್ಷಿತ ಪ್ರಮಾಣದ ಆದಾಯ ಸಿಗುವುದಿಲ್ಲ. ಆದ್ದರಿಂದ ಕದ್ರಿ ಪಾರ್ಕ್ ರಸ್ತೆಗೆ ಟೋಲ್ಗೇಟ್ ಮಾದರಿಯಲ್ಲಿ ಶುಲ್ಕ ವಿಧಿಸಲು ಸ್ಮಾರ್ಟ್ ಸಿಟಿ ನಿರ್ಧರಿಸಿದೆ.
ಅತ್ಯಾಧುನಿಕ ತಂತ್ರಜ್ಞಾನ, ಕ್ಯಾಮರಾ ಬಳಸಿ, ವಾಹನದ ನಂಬರ್ ಪ್ಲೇಟ್ ಇಮೇಜ್ ಸೆರೆಹಿಡಿದು ವಾಹನದ ಫಾಸ್ಟ್ ಟ್ತಾಗ್ಗೆ ಲಿಂಕ್ ಮಾಡಲಾಗುತ್ತದೆ. ಪಾರ್ಕ್ ರಸ್ತೆಗೆ ಎಂಟ್ರಿಯಾಗುವ ಎರಡೂ ಕಡೆಗಳಲ್ಲಿ ಈ ಟೋಲ್ಗೇಟ್ ಮಾದರಿಯ ತಂತ್ರಜ್ಞಾನ ಅಳವಡಿಸಲಾಗುತ್ತದೆ.
ಇದನ್ನೂ ಓದಿ : ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ



















