ಮಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ ಕಂಡಿದೆ.
ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಅವಘಡದಲ್ಲಿ ಅಮಾಯಕ ಜೀವಗಳನ್ನು ಬಲಿ ಪಡಿದಿದೆ. ಆರು ಜನರಿದ್ದ ಕುಟುಂಬದಲ್ಲಿ ಇಬ್ಬರು ಮೊಮ್ಮಕ್ಕಳು ಸೇರಿ ಅಜ್ಜಿ ಮೃತಪಟ್ಟಿದ್ದಾರೆ.
ಅಜ್ಜಿ ಪ್ರೇಮಾ ಪೂಜಾರಿ, ಮೊಮ್ಮಕ್ಕಳಾದ ಆರ್ಯನ್ ಮತ್ತು ಆರುಷ್ ಮೃತ ಪಟ್ಟಿದ್ದಾರೆ. 10 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದ ಆರುಷ್ ಕೂಡ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾನೆ. ಅವಶೇಷಗಳಡಿ ಸಿಲುಕಿ ನರಳಾಡುತ್ತಿದ್ದ ತಾಯಿ ಅಶ್ವಿನಿಯನ್ನು ರಕ್ಷಣೆ ಮಾಡಲಾಗಿದೆ.