ಶಿವಮೊಗ್ಗ: ಕಾಶ್ಮೀರದ (Jammu and Kashmir) ಪಹಲ್ಗಾಮ್ನಲ್ಲಿ ಉಗ್ರರ (Pahalgam Terror Attack) ದಾಳಿಗೆ ಬಲಿಯಾಗಿರುವ ಮಂಜುನಾಥ್ ಅವರ ಮೃತದೇಹ ಶಿವಮೊಗ್ಗ (Shivamogga) ತಲುಪಿದೆ.
ಬೆಂಗಳೂರಿನಿಂದ ತುಮಕೂರು, ಚಿತ್ರದುರ್ಗ ಮಾರ್ಗವಾಗಿ ಆಂಬುಲೆನ್ಸ್ ಮೂಲಕ ಮಂಜುನಾಥ್ ಪಾರ್ಥಿವ ಶರೀರ ಅವರ ನಿವಾಸ ತಲುಪಿದೆ. ತುಮಕೂರಿನ ಕ್ಯಾತಸಂದ್ರದ ಟೋಲ್ ಗೇಟ್ ನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ನಗರ ಶಾಸಕ ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.
ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಶಿವಮೊಗ್ಗದಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮನೆ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ.