ಚಿತ್ರದುರ್ಗ: ನೀರು ಶುದ್ಧೀಕರಣಕ್ಕಾಗಿ ಬಳಸುವ ಕ್ಲೊರಿನ್ ಗ್ಯಾಸ್ ಸೋರಿಕೆಯಿಂದಾಗಿ ಸುಮಾರು 20ಕ್ಕೂ ಅಧಿಕ ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಹತ್ತಿರ ಈ ಅವಘಡ ಸಂಭವಿಸಿದೆ. ಆದರೆ, ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅಸ್ವಸ್ಥರನ್ನು ಹೊಸದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎಪಿಎಂಸಿ ಸುತ್ತಮುತ್ತ ಜನರಲ್ಲಿ ಆತಂಕ ಮನೆ ಮಾಡಿದೆ.