ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ (MRPL Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಗ್ರ್ಯಾಜುಯೇಟ್ ಅಥವಾ ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವಿರ ಈ ಕೆಳಗಿನಂತಿದೆ. ಹುಬ್ಬಳ್ಳಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್ ಆಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆಯ ಹೆಸರು : ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳ ಸಂಖ್ಯೆ: ವಿವಿಧ
ಉದ್ಯೋಗ ಸ್ಥಳ: ಹುಬ್ಬಳ್ಳಿ
ಹುದ್ದೆ ಹೆಸರು: ಗ್ರ್ಯಾಜುಯೇಟ್ ಅಥವಾ ಟೆಕ್ನಿಶಿಯನ್ ಅಪ್ರೆಂಟಿಸ್
ನೇರ ಸಂದರ್ಶನದ ದಿನಾಂಕ: ಜನವರಿ 22
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಬಿಇ ಅಥವಾ ಬಿ ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗುವವರಿಗೆ ಯಾವುದೇ ಶುಲ್ಕವಿರುವುದಿಲ್ಲ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ mrpl.co.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ನಿಗದಿತ ದಿನಾಂಕದಂದು ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನ ನಡೆಯುವ ಸ್ಥಳದ ವಿಳಾಸ ಇಲ್ಲಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
KLE Technological University, Smt. C.I. Munavalli Polytechnic, B. V. Bhoomaraddi Campus, Vidyanagar, Hubballi – 580 031
ಇದನ್ನೂ ಓದಿ : ಎಕ್ಸಿಮ್ ಬ್ಯಾಂಕಿನಲ್ಲಿ 60 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ | 85 ಸಾವಿರ ರೂ. ಸಂಬಳ



















