ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದ ವಿವಾಹಿತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೀರ್ತಿ ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಮಹಿಳೆ. ಎರಡು ವರ್ಷಗಳ ಹಿಂದೆ ಮೃತ ಕೀರ್ತಿ ಮತ್ತು ಗುರು ಪ್ರಸಾದ್ ಮದುವೆ ಆಗಿದ್ದರು. ಭಾನುವಾರ ಬೆಳಗ್ಗೆ ಕೀರ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿ ಗುರುಪ್ರಸಾದ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಪರಿಚಯಸ್ಥರು ಕೀರ್ತಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ, ಬಳಿಕ ಆಕೆಯ ಪೋಷಕರು ಪತಿ ಗುರುಪ್ರಸಾದ್ ಕರೆ ಮಾಡಿದರೆ, ಆಗ ತಲೆ ತಿರುಗಿ ಬಿದ್ದಿದ್ದಳು ಆಸ್ಪತ್ರೆಗೆ ಸೇರಿಸಿದ್ದೇವೆ ಎಂದು ಪತಿ ಗುರು ಪ್ರಸಾದ್ ಪೋಷಕರಿಗೆ ಮಾಹಿತಿ ನೀಡಿದ್ದಾನೆ.
ಕೀರ್ತಿ ಪೋಷಕರು ಎರಡು ವರ್ಷಗಳ ಹಿಂದೆ ಕೈತುಂಬ ವರದಕ್ಷಿಣೆ ಕೊಟ್ಟು ಗುರುಪ್ರಸಾದ್ ಜೊತೆ ಮದುವೆ ಮಾಡಿದ್ದರು. ಆದರೆ ಕಳೆದ ಎರಡು ತಿಂಗಳಿಂದ ಪತಿ ಕಿರುಕುಳ ನೀಡುತ್ತಿದ್ದಾನೆ ಎಂದು ತಾಯಿಯೊಂದಿಗೆ ಕೀರ್ತಿ ತನ್ನ ನೋವು ಹೇಳಿಕೊಂಡಿದ್ದಳು ಎಂದು ಪೋಷಕರು ತಿಳಿಸಿದ್ದಾರೆ.
ಸದ್ಯ ಈ ಪ್ರಕರಣ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ.. ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಬಾಯ್ಬಿಟ್ಟ ಆರೋಪಿ!



















