ದಕ್ಷಿಣ ಕನ್ನಡ : ಜಿಲ್ಲೆಯ ಪುತ್ತೂರಿನ ಕೆದಂಬಾಡಿ ನಿವಾಸಿ ವಿವಾಹಿತ ಮಹಿಳೆಯೊಬ್ಬರು ಸುಳ್ಯದ ಸಂಪಾಜೆಯಲ್ಲಿರುವ ಪತಿ ಮನೆಯಲ್ಲಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಫಾತಿಮಾತ್ ನಿಶಾನ ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ತಾಯಿ ಜುಬೈದ ಅವರು, ತಮ್ಮ ಮಗಳಿಗೆ ಅತ್ತೆ, ಮಾವ ಮತ್ತು ನಾದಿನಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ದೂರು ನೀಡಿದ್ದಾರೆ.
ಮಗಳು ತನ್ನ ಪತಿಯೊಂದಿಗೆ ಫೋನ್‌ನಲ್ಲಿ ಮಾತನಾಡುವ ಸಂದರ್ಭದಲ್ಲಿ ಮಾವ ಅಲವಿ ಫೋನ್ ಕಸಿದುಕೊಳ್ಳುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದ್ದು, ಅತ್ತೆ, ಮಾವ ಹಾಗೂ ನಾದಿನಿ ಸೇರಿಕೊಂಡು ತಮ್ಮ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ತಾಯಿ ಜುಬೈದ ಆರೋಪಿಸಿದ್ದಾರೆ.
ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) 85 ಮತ್ತು 103(1) ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದ ತಿಳಿದುಬರಬೇಕಿದೆ
ಇದನ್ನೂ ಓದಿ : ಫುಟ್‌ಪಾತ್ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!



















