ಬೆಂಗಳೂರು: ಬಸ್ಸಲ್ಲಿ ಓಡಾಡುವರಿಗೆ ಮಾಸ್ಕ್ ಕಡ್ಡಾಯ ಮಾಡಿಲ್ಲ, ಆದ್ರೆ ಮಾಸ್ಕ್ ಹಾಕಿಕೊಳ್ಳಿ ಎಂದು ಸಲಹೆ ಕೊಟ್ಟಿದ್ದೇವೆ ಅಷ್ಟೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೃದಯ ಸಂಬಂಧಿಸಿದ ಕಾಯಿಲೆ, ಜ್ವರ, ಇನ್ನಿತರೆ ಆರೋಗ್ಯ ಸಮಸ್ಯೆಗಳಿದ್ದರೆ ಮಾಸ್ಕ್ ಹಾಕಿಕೊಳ್ಳುವುದು ಉತ್ತಮ. ಡ್ರೈವರ್ & ಕಂಡಕ್ಟರ್ ಸಹ ಮಾಸ್ಕ್ ಹಾಕಿಕೊಳ್ಳಬೇಕು. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಗೈಡೆಲೈನ್ಸ್ ನೀಡುತ್ತದೆ.
ಮುಂದಿನ ದಿನಗಳಲ್ಲಿ ಮಾಸ್ಕ್ ಕಡ್ಡಾಯ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದರು.