ಬೆಂಗಳೂರು : ನಾಳೆಯಿಂದ ಮೂರು ದಿನಗಳ ಕಾಲ ಆಶಾ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆಗೆ ಮುಂದಾಗಿದೆ.
“ಆಶಾ ಕಾರ್ಯಕರ್ತರ ಬೇಡಿಕೆಗಳೇನು ?”
- ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ & ಕೇಂದ್ರದ ಭಾಗಶಃ ಗೌರವಧನ ಸೇರಿಸಿ. – ಮಾಸಿಕ ರೂ.10,000 ಗೌರವಧನ ಈ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು.
- 2025 ಮುಖ್ಯಮಂತ್ರಿ ಬಜೆಟ್‌ನಲ್ಲಿ ಎಲ್ಲ ಅಂಗನವಾಡಿ ಮತ್ತು ಬಿಸಿಯೂಟ. ಕಾರ್ಯಕರ್ತೆಯರಿಗೆ ರೂ.1,000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು.
- ಜನಸಂಖ್ಯೆ ಹೆಚ್ಚಿಸಿ ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
- ಅವೈಜ್ಞಾನಿಕ ಆಶಾ ಪರ್ಫಾಮೆನ್ಸ್ ಆಪ್ರೈಸಲ್ ಕೈಬಿಡಬೇಕು.
- ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು.
- ನಿವೃತ್ತ ಆಶಾ ಕಾರ್ಯಕರ್ತರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು.
- 2025ರಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಆಶಾ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು.