ಕರಾಚಿ : ಪಾಕ್‌ನಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದ್ದು, 16 ಜನ ಬಲಿಯಾಗಿರುವ ಘಟನೆ ನಡೆದಿದೆ. ಅಲ್ಲಿನ ಕರಾಚಿಯಲ್ಲಿ ಭಾರಿ ಸ್ಫೋಟ(Blast) ಸಂಭವಿಸಿದ್ದು, ಮಕ್ಕಳು ಸೇರಿದಂತೆ 16 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ, ಈ ಘಟನೆಯಲ್ಲಿ ಸುಮಾರು 14 ಜನ ಗಾಯಗೊಂಡಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.
ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದಲ್ಲಿನ ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಈ ಪ್ರಬಲ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಇಂದಿನಿಂದ ಪವಿತ್ರ ರಂಜಾನ್ ಮಾಸ ಆರಂಭವಾಗಿದ್ದು, ಈ ಸಂದರ್ಭದಲ್ಲಿ ದುರ್ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಆದರೆ, ಅನಿಲ ಸೋರಿಕೆಯಿಂದಲೇ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಅಲ್ಲಿದ್ದ ಮನೆಗಳಲ್ಲಿ ದೈನಂದಿನ ಬಳಕೆಗಾಗಿ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಿಲಿಂಡರ್ ಬಳಸಲಾಗುತ್ತಿತ್ತು. ಸ್ಫೋಟದ ಸ್ಥಳದಿಂದ ಇದುವರೆಗೆ 14 ಶವಗಳನ್ನು ಆಸ್ಪತ್ರೆಗಳಿಗೆ ತರಲಾಗಿದೆ. 14 ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ವರದಿ ಹೇಳಿವೆ. ಸ್ಫೋಟದ ಪರಿಣಾಮವಾಗಿ ಕಟ್ಟಡದ ಒಂದು ಭಾಗ ಶಿಥಿಲಗೊಂಡಿದ್ದರಿಂದ ಕುಸಿದು ಬಿದ್ದಿದೆ. ಹೀಗಾಗಿ ಸಾವು-ನೋವು ಹೆಚ್ಚಾಗಿವೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?



















