ಕೋಲ್ಕತ್ತಾದಲ್ಲಿನ ಸೀಲ್ದಾಹ್ ಇಎಸ್ ಐ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ರೋಗಿ ಸಾವನ್ನಪ್ಪಿದ್ದಾರೆ.
ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿವೆ. ಈ ಘಟನೆ ಬೆಳಗಿನ ಜಾವ 5.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅನೇಕ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಮೂಲಗಳ ಪ್ರಕಾರ, ರೋಗಿಯು ಹೊಗೆಯನ್ನು ಉಸಿರಾಡಿರುವುದರಿಂದ ಉಸಿರಾಟದ ತೊಂದರೆ ಅನುಭವಿಸಿದ್ದಾರೆ. ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಅತ್ಯಂತ ಧೈರ್ಯದಿಂದ ಮತ್ತು ತ್ವರಿತವಾಗಿ ಕೆಲಸ ಮಾಡಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಸುಜಿತ್ ಬೋಸ್ ಹೇಳಿದ್ದಾರೆ. ಆದರೆ, ಈ ಘಟನೆಗೆ ನಿಖರ ಕಾರಮ ಮಾತ್ರ ತಿಳಿದು ಬಂದಿಲ್ಲ.
ಆಸ್ಪತ್ರೆಯಲ್ಲಿ ಸುಮಾರು 80 ಜನ ಇದ್ದರು ಎಂದು ತಿಳಿದು ಬಂದಿದೆ. ಆದರೆ, ICU ಗೆ ದಾಖಲಾಗಿದ್ದ ಓರ್ವ ರೋಗಿ ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಬೆಂಕಿಯನ್ನು ನೋಡಿದ್ದೇವೆ ಮತ್ತು ನಾವು ಸೈರನ್ ರಿಂಗಿಂಗ್ ಅನ್ನು ಕೇಳಿದ್ದೇವೆ. ಜನರು ಕಿರುಚುತ್ತಿರುವುದನ್ನು ನಾವು ಕೇಳಿದ್ದೇವೆ, ನಾವು ಹೊರ ಬಂದಾಗ ಬೆಂಕಿ ಹೊತ್ತಿಕೊಂಡಿತ್ತು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿದೆ ಎಂದು ಭಾವಿಸಲಾಗಿದೆ. ಘಟನೆಯಲ್ಲಿ ಸುಮಾರು 80 ರಿಂದ 81 ಜನರನ್ನು ರಕ್ಷಿಸಲಾಗಿದೆ. ಹೊಗೆಯಿಂದಾಗಿ ಕ್ಯಾನ್ಸರ್ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ. 54 ರೋಗಿಗಳು ಬೇರೆ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.