ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 17 ಜನ ವಿದ್ಯಾರ್ಥಿಗಳು ಸಾವನ್ನಪ್ಪಿ, 14 ಜನ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹಿಲ್ ಸೈಡ್ ಎಂದರಶಾ ಎಂಬ ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆಯೂ ಈ ಪ್ರದೇಶದಲ್ಲಿ ಇಂತಹ ಘಟನೆಗಳು ನಡೆದಿದ್ದವು. ನೈರೋಬಿಯ ಆಗ್ನೇಯ ಭಾಗದಲ್ಲಿರುವ ಮಚಾಕೋಸ್ ಕೌಂಟಿಯಲ್ಲಿ 20 ವರ್ಷಗಳ ಹಿಂದೆ ನಡೆದ ಅತ್ಯಂತ ಭೀಕರ ಕೀನ್ಯಾದ ಶಾಲಾ ಅಗ್ನಿ ಅವಘಡದಲ್ಲಿ ಕನಿಷ್ಠ 67 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಕೀನ್ಯಾದಲ್ಲಿ ಶಾಲೆಗಳಲ್ಲಿ ಬೆಂಕಿ ಅವಢಗಳು ಹೆಚ್ಚಾಗಿ ಸಂಭವಿಸುತ್ತಿರುವುದು ದುರದುಷ್ಟಕರ. ಅಲ್ಲಿ 2015-16ರ ಒಂದೇ ವರ್ಷದಲ್ಲಿ ಬೆಂಕಿ ಅವಘಡಕ್ಕೆ ಸುಮಾರು 350 ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.