ಬೆಳಗಾವಿ: ಭಾರೀ ಅಗ್ನಿ ಅವಘಡದಿಂದ 12ಕ್ಕೂ ಅಧಿಕ ಅಂಗಡಿ ಮುಂಗಟ್ಟುಗಳು ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ನಡೆದಿದೆ.
ಜುಗೂಳ ಗ್ರಾಮದ ಪ್ಯಾಟೆ ಓಣಿಯಲ್ಲಿ ರಾತ್ರಿ 1 ಗಂಟೆಗೆ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಕೋಟ್ಯಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದ್ದು,
12 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ದುಂರತ ಸಂಭವಿಸಿದ ಶಂಕೆ ವ್ಯಕ್ತವಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಅಗ್ನಿ ನಂದಿಸಿದ್ದಾರೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ನಡೆದ ಘಟನೆ ನಡೆದಿದೆ.
ಇದನ್ನೂ ಓದಿ : ಹಾವೇರಿ : ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು



















