ಶಿವಮೊಗ್ಗ : 2008ರಲ್ಲಿ ರದ್ದಾದ ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆ ಹೋರಾಟ ಸಮಿತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಹೊಸನಗರದ ಮೂಲಗದ್ದೆ ಮಠದ ಅಭಿನವ ಶ್ರೀ ಚನ್ನಬಸವ ಸ್ವಾಮೀಜಿ, ಮಾಜಿ ಶಾಸಕ ಬಿ.ಸ್ವಾಮಿರಾವ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ನೇತೃತ್ವದಲ್ಲಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಹೊಸನಗರದಿಂದ ರಿಪ್ಪನ್ ಪೇಟೆವರೆಗೆ 45 ಕಿ.ಮೀ ಬೃಹತ್ ಪಾದಯಾತ್ರೆ ನಡೆಸಲಾಗಿದೆ.
5 ಡ್ಯಾಂ ನಿರ್ಮಿಸಿ ಅನ್ಯಾಯ ಮಾಡಿದ್ದು, ಹೊಸನಗರ ತಾಲೂಕು ಅಭಿವೃದ್ಧಿಗಾಗಿ ಕ್ಷೇತ್ರ ಮರು ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಬೃಹತ್ ಪಾದಯಾತ್ರೆಯಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಸಾವಿರಾರು ಜನರು ಪಕ್ಷಾತೀತವಾಗಿ ಭಾಗಿಯಾಗಿದ್ದು, ಇಂದು ಸಂಜೆ ರಿಪ್ಪನ್ ಪೇಟೆಯಲ್ಲಿ ಬಹಿರಂಗ ಸಮಾವೇಶ ಬಳಿಕ ಪಾದಯಾತ್ರೆ ಮುಕ್ತಾಯಗೊಳ್ಳಲಿದೆ.
ಇದನ್ನೂ ಓದಿ : ಯುದ್ಧ ಮುಗಿದರೂ ಇಳಿಯಲ್ಲ ತೈಲ ಬೆಲೆ.. ಜಾಗತಿಕ ಮಾರುಕಟ್ಟೆ ಚೇತರಿಸಿಕೊಳ್ಳಲು ಬೇಕು ಇನ್ನಷ್ಟು ಸಮಯ!



















