ಬೆಂಗಳೂರು: ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ.
ನಗರದ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ವಿಶೇಷವಾಗಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯ ವೇಳೆ ಕೆಲವರು ಖಮೇನಿ ಅವರ ಭಾವಚಿತ್ರವನ್ನು ತಬ್ಬಿಕೊಂಡು ಕಣ್ಣೀರಿಟ್ಟದ್ದಾರೆ ಎನ್ನಲಾಗಿದೆ. ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಪ್ರತಿಭಟನಾಕಾರರು ನ್ಯಾಯಯುತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ಪ್ರತಿಭಟನಾ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇದನ್ನೂ ಓದಿ : ಇರಾನ್‌ನ ಸರ್ವೋಚ್ಛ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ | ಗೌರಿಬಿದನೂರಿನಲ್ಲಿ ರಸ್ತೆಗಿಳಿದು ಪ್ರತಿಭಟನೆ



















