ಶಿವಮೊಗ್ಗ : ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಮಾದಿಗ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ಎಸ್ ಸಿ ಪಟ್ಟಿಯಲ್ಲಿರುವ ಅರ್ಹ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಒಳ ಮೀಸಲು ಜಾರಿಗೊಳಿಸುವಂತೆ ಆಗ್ರಹಿಸಲಾಗಿದೆ.
ಮಾದಿಗ ಸಮಾಜದ ವತಿಯಿಂದ ಭಾರಿ ಸಂಖ್ಯೆಯಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಮೊದಲು ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ, ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ, ಶಿಕ್ಷಣ, ಉದ್ಯೋಗ, ರಾಜಕೀಯ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಹಿಂದುಳಿದಿರುವ ಮಾದಿಗ ಸಮಾಜಕ್ಕೆ ನ್ಯಾಯ ಒದಗಿಸುವಂತೆ ಆಗ್ರಹ ಮಾಡಿದ್ದಾರೆ.
ಶ್ರೀ ಷಡಾಕ್ಷರ ಮುನಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯ ಪ್ರಕಾರ ಒಳ ಮೀಸಲಾತಿ ಜಾರಿಗೊಳಿಸಬೇಕು.
ಪರಿಶಿಷ್ಟ ಜಾತಿಯಲ್ಲಿರುವ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ವರ್ಗಿಕರಣ ಮಾಡಬೇಕು ಹಾಗೂ ಪ್ರತಿಯೊಂದು ಉಪ ಜಾತಿಗೂ ಶಿಕ್ಷಣ ಉದ್ಯೋಗ ಮತ್ತು ರಾಜಕೀಯದಲ್ಲಿ ಸಮಾನವಾದ ಪಾಲು ಒದಗಿಸಬೇಕು. ತುಳಿತ ಕೊಳಗಾದ ಸಮುದಾಯಗಳ ಅಭಿವೃದ್ಧಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಬೇಡಿಕೆಯ ಈಡೇರಿಕೆಗೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್!



















