ಬೆಂಗಳೂರು: ದೇಶದ ಪ್ರಮುಖ ಕಲ್ಲಿದ್ದಲು ಉತ್ಪಾದನಾ ಕಂಪನಿಯಾದ ಮಹಾನದಿ ಕೋಲ್ ಫೀಲ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಡಿಶಾದ ಅಂಗುಲ್ ನಲ್ಲಿರುವ ಕಂಪನಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಫ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಮಹಾನದಿ ಕೋಲ್ ಫೀಲ್ಡ್ ಲಿಮಿಟೆಡ್ ನಲ್ಲಿ ಒಟ್ಟು 10 ಹುದ್ದೆಗಳು ಖಾಲಿ ಇವೆ. ಐದು ರೆವೆನ್ಯೂ ಇನ್ಸ್ ಪೆಕ್ಟರ್ ಹಾಗೂ ಐದು ಅಮಿನ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ರೆವೆನ್ಯೂ ಇನ್ಸ್ ಪೆಕ್ಟರ್ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ 20 ಸಾವಿರ ರೂ. ಹಾಗೂ ಅಮಿನ್ ಹುದ್ದೆಗಳಿಗೆ ಮಾಸಿಕ 15 ಸಾವಿರ ರೂ. ಸಂಬಳ ನೀಡಲಾಗುತ್ತದೆ. ವಿದ್ಯಾರ್ಹತೆ, ಅನುಭವ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತಿಯುಳ್ಳ ಅಭ್ಯರ್ಥಿಗಳು ಮೊದಲಿಗೆ mahanadicoal.in ವೆಬ್ ಸೈಟ್ ಗೆ ಭೇಟಿ ನೀಡಿ ನೇಮಕಾತಿ ಕುರಿತ ಅಧಿಸೂಚನೆಯನ್ನು ಓದಬೇಕು. ಆನ್ ಲೈನ್ ನಲ್ಲೇ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ವಿದ್ಯಾರ್ಹತೆಯ ದಾಖಲೆಗಳು, ವೈಯಕ್ತಿಕ ವಿವರಗಳುಳ್ಳ ಎಲ್ಲ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಬೇಕು. ನಂತರ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ: Office of General Manager, Subhadra Area, Near Biju Maidan, Po./Dist.-Angul, Odisha-759122. ಹೆಚ್ಚಿನ ಮಾಹಿತಿಗೆ 9437562280/ 8093829249 ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ. ಕೆಲಸದ ಅವಧಿಯಲ್ಲಿ ಮಾತ್ರ ಕರೆ ಮಾಡುವಂತೆ ಸೂಚಿಸಲಾಗಿದೆ.