ಬೆಂಗಳೂರು : ಅಂತರರಾಷ್ಟ್ರೀಯ ಮಟ್ಟದ ಡ್ರಗ್ ಜಾಲವನ್ನು ಯಶವಂತಪುರ ಪೊಲೀಸರು ಬೇಧಿಸಿದ್ದಾರೆ. ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳಾದ ಸೈಯದ್ ಸುಹೇಲ್, ಮೊಹಮ್ಮದ್ ಸಮೀರ್, ಸಾದಿಕ್ ಪಾಷಾ ಮತ್ತು ಮೊಹಮ್ಮದ್ ಹಕ್ರನ್ನು ಬಂಧಿಸಲಾಗಿದ್ದು, ಈ ನಾಲ್ವರಿಂದ 9 ಕೋಟಿ ರೂಪಾಯಿ ಮೌಲ್ಯದ 8 ಕೆಜಿ ಎಂಡಿಎಂಎ (MDMA) ಸೀಜ್ ಮಾಡಲಾಗಿದೆ.
ಆರೋಪಿಗಳು ನೈಜೀರಿಯಾ ಪ್ರಜೆಗಳಿಂದ ಡ್ರಗ್ಸ್ ಖರೀದಿಸಿ ನಗರದಲ್ಲಿ ಸ್ಥಳೀಯರಿಗೆ ಪೂರೈಸುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಬಂಧಿತರಿಂದ ಒಂದು ಕಾರು ಹಾಗೂ ಐದು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳಲ್ಲಿ ಸೈಯದ್ ಸುಹೇಲ್ ಹೊಸಕೋಟೆ ಠಾಣೆಯ ರೌಡಿಶೀಟರ್ ಆಗಿದ್ದು, ಈ ಹಿಂದೆ ಪ್ರಕರಣವೊಂದರಲ್ಲಿ ಪೊಲೀಸರು ಈತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು. ಸದ್ಯ ಈ ಜಾಲಕ್ಕೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!



















