ಬೆಂಗಳೂರು : ಶ್ರೀರಾಮ ನವಮಿ ಹಬ್ಬದ ಅಂಗವಾಗಿ ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಜಿಬಿಎ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಮಾರ್ಚ್ 27 ರಂದು ನಡೆಯಲಿರುವ ಶ್ರೀರಾಮ ನವಮಿ ಪ್ರಯುಕ್ತ ಈ ಕ್ರಮ ಕೈಗೊಳ್ಳಲಾಗಿದೆ. ಆ ದಿನ ನಗರದಲ್ಲಿರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ನಡೆಸುವುದನ್ನು ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದಿದ್ದಾರೆ.
ಹಬ್ಬದ ಹಿನ್ನೆಲೆ ಶಾಂತಿ, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ನಗರದ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.


















