ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಮೆಟಾಲರ್ಜಿಕಲ್ ಆ್ಯಂಡ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಲಿಮಿಟೆಡ್ (MECON Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ಮೆಟಾಲರ್ಜಿಕಲ್ ಆ್ಯಂಡ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಲಿಮಿಟೆಡ್ (MECON)
ಒಟ್ಟು ಹುದ್ದೆಗಳು: 03
ಹುದ್ದೆ ಹೆಸರು: ಅಸಿಸ್ಟಂಟ್ ಮ್ಯಾನೇಜರ್
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್ ಹಾಗೂ ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 29
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದೇಶದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಎಸ್ಸಿ ಅಥವಾ ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 30 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.6 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು AGM I/c (HR), Recruitment Section, HR Department, MECON Limited, Doranda, Ranchi, Jharkhand – 834002 ವಿಳಾಸಕ್ಕೆ ಕಳುಹಿಸಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು meconlimited.co.in ವೆಬ್ ಸೈಟ್ ಗೆ ಭೇಟಿ ನಿಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದ ಬಳಿಕ ನೇಮಕಾತಿ ಆದೇಶ ನೀಡಲಾಗುತ್ತದೆ.