ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ಸಿಕ್ಕಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಮೆಟಾಲರ್ಜಿಕಲ್ ಆ್ಯಂಡ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಲಿಮಿಟೆಡ್ (MECON Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 159 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಮೆಟಾಲರ್ಜಿಕಲ್ ಆ್ಯಂಡ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಲಿಮಿಟೆಡ್ (MECON)
ಒಟ್ಟು ಹುದ್ದೆಗಳು: 159
ಹುದ್ದೆ ಹೆಸರು: ಎಂಜಿನಿಯರ್
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 17
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದೇಶದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ, ಬಿ.ಟೆಕ್, ಡಿಪ್ಲೋಮಾ, ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 67 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 500 ರೂಪಾಯಿ ಅರ್ಜಿ ಶುಲ್ಕವಿರುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು meconlimited.co.in ಗೆ ಭೇಟಿ ನೀಡಬಹುದು.
ಇದನ್ನೂ ಓದಿ :ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!



















