ಬೆಂಗಳೂರು: ಹುಬ್ಬಳ್ಳಿಯಲ್ಲಿರುವ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ (Karnataka Medical College & Research Institute Recruitment 2025) ಖಾಲಿ ಇರುವ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ
ಒಟ್ಟು ಹುದ್ದೆ: ವಿವಿಧ
ಹುದ್ದೆಗಳ ಹೆಸರು: ಅಸಿಸ್ಟಂಟ್ ಪ್ರೊಫೆಸರ್
ನೇಮಕಾತಿ ವಿಧಾನ: ನೇರ ಸಂದರ್ಶನ
ಅಸಿಸ್ಟಂಟ್ ಪ್ರೊಫೆಸರ್ ಆಗಲು ಬಯಸುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ನೇರ ಸಂದರ್ಶನದ ವೇಳೆ ಅಭ್ಯರ್ಥಿಗಳ ಅರ್ಹತೆ ಹಾಗೂ ಅನುಭವವನ್ನು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕವೇ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ನವೆಂಬರ್ 10ರಂದು ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ದಿನಾಂಕದ ಕುರಿತು ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ನೇರ ಸಂದರ್ಶನದ ದಿನಾಂಕ, ಅಗತ್ಯ ದಾಖಲೆಗಳ ಕುರಿತು ಮಾಹಿತಿ ಸೇರಿ ಯಾವುದೇ ಮಾಹಿತಿ ಪಡೆಯಲು ಅಧಿಕೃತ ವೆಬ್ ಸೈಟ್ ಆಗಿರುವ kmcrihubballi.karnataka.gov.in ಗೆ ಭೇಟಿ ನೀಡಬಹುದಾಗಿದೆ. ದಿನಾಂಕ ಘೋಷಣೆಯಾದ ಕೂಡಲೇ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ:
Karnataka Medical College & Research Institute, Hubballi -580021
ಇದನ್ನೂ ಓದಿ : ಪಾಕ್‌ನಲ್ಲಿ ದಾಳಿ ನಡೆಸಿದ್ದು ನಾವೇ ; ಮತ್ತೆ ದಾಳಿ ನಡೆಸ್ತೇವೆ ಎಂದು ಎಚ್ಚರಿಸಿದ ತಾಲಿಬಾನ್



















