ಬೆಂಗಳೂರು | ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ವೈದ್ಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮುಂಭಾಗ ನಡೆದಿದೆ. ಕೃತಿಕಾ (21) ಟಿಪ್ಪರ್ ಲಾರಿಗೆ ಬಲಿಯಾದ ವೈದ್ಯ ವಿದ್ಯಾರ್ಥಿನಿ.
ನಿನ್ನೆ ಸಂಜೆ ಕಾಲೇಜು ಮುಗಿಸಿ ಆಕ್ಟಿವಾದಲ್ಲಿ ಕೃತಿಕಾ ತೆರಳುತ್ತಿದ್ದ ವೇಳೆ ಈ ದುರಂತ ನಡೆದಿದೆ. ಹಿಂಬದಿಯಲ್ಲಿ ಸ್ನೇಹಿತೆ ಎಂಬಿಬಿಎಸ್ ವಿದ್ಯಾರ್ಥಿನಿ ಹಂಸ (21) ಕುಳಿತಿದ್ರು. ಕಾಲೇಜು ಮುಗಿಸಿ ಗೇಟ್ ಹೊರಗೆ ಬಂದಿದ್ದ ವೇಳೆ ಅತಿವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಕೃತಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮತ್ತೊಬ್ಬ ವಿದ್ಯಾರ್ಥಿನಿ ಹಂಸಗೆ ಗಂಭೀರ ಗಾಯವಾಗಿದ್ದು, ಅವರಿಗೆ ಆರ್‌ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಕೆಂಗೇರಿ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನಾ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ನಾಳೆಯೇ ರೈತರ ಖಾತೆಗಳಿಗೆ 2 ಸಾವಿರ ರೂ. ಜಮೆ – ಇಂದೇ ಈ ಕೆಲಸ ಮುಗಿಸಿ!


















