ಮಂಗಳೂರು : ಮೆಡಿಕಲ್ ವಿದ್ಯಾರ್ಥಿಯೊಬ್ಬ ಸ್ನೇಹಿತರನ್ನು ಮೀಟ್ ಮಾಡಲು ಪರಿಚಯಸ್ಥರ ಫ್ಲಾಟ್ಗೆ ಬಂದಿದ್ದ ವೇಳೆ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಖಾಸಾಗ್ರಾಂಡ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ವಿದ್ಯಾರ್ಥಿಯ ಹೆಸರು ಮತ್ತು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.
ಆಟವಾಡುವಾಗ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿ ಬಳಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆಟವಾಡುವಾಗ ಆಯತಪ್ಪಿ ಬಿದ್ದು ಕೀರ್ತನಾ(10) ಸಾವನ್ನಪ್ಪಿದ್ದಾಳೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕೊನೆಗೂ MALಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್.. ಒಬ್ಬರಿಗೆ ಎಷ್ಟು ಗೊತ್ತಾ?


















