ವಿಜಯಪುರ: ಹೃದಯಾಘಾತಕ್ಕೆ ವೈದ್ಯಕೀಯ ವಿದ್ಯಾರ್ಥಿ ಬಲಿಯಾಗಿರುವ ಘಟನೆಯೊಂದು ನಡೆದಿದೆ.
ಬೆಂಗಳೂರಿನ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ವೈಭವ ಕುಲಕರ್ಣಿ (26) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ ಎನ್ನಲಾಗಿದೆ. ವೈಭವ್ ನನ್ನು ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುಮಸಗಿ ಗ್ರಾಮದರು ಎನ್ನಲಾಗಿದೆ. ವೈಭವ್ ಬೆಂಗಳೂರಿನಲ್ಲಿ ಎಂಬಿಬಿಎಸ್ ಕೊನೆಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ತಮಿಳುನಾಡಿಗೆ ಟೂರ್ ಗೆ ಹೋಗಿದ್ದರು ಎನ್ನಲಾಗಿದೆ.
ಆದರೆ, ಟೂರ್ ಮುಗಿಸಿಕೊಂಡು ಮರಳಿ ಬರುತ್ತಿದ್ದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಂಬಂಧಿಕರು ಆಲಮೇಲ ತಾಲೂಕಿನ ಸ್ವಗ್ರಾಮಕ್ಕೆ ಶವ ತೆಗೆದುಕೊಂಡು ತೆರಳುತ್ತಿದ್ದಾರೆ.


















