ಸಿಎಂ ಡಿ.ಕೆ. ಶಿವಕುಮಾರ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಕುರಿತು ನಗರದ ಶಾಸಕರ ಸಭೆಯನ್ನು ಮಂಗಳವಾರ ನಡೆಸಿದರು. ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ, ರಿಜ್ವಾನ್ ಅರ್ಷದ್, ಶಾಸಕ ದಿನೇಶ್ ಗುಂಡೂರಾವ್, ಶ್ರೀನಿವಾಸ್, ಅಶ್ವಥ್ ನಾರಾಯಣ, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ್, ಸತೀಶ್ ರೆಡ್ಡಿ, ಮಂಜುಳಾ ಅರವಿಂದ್ ಲಿಂಬಾವಳಿ, ಎಸ್.ಆರ್. ವಿಶ್ವನಾಥ್, ರವಿ ಸುಬ್ರಮಣ್ಯ, ಎಂಎಲ್ಎ ವಿನಯ್ ಕಾರ್ತಿಕ್, ಗೋವಿಂದರಾಜು ಮತ್ತು ಶರವಣ ಉಪಸ್ಥಿತರಿದ್ದರು. ಇವರೊಂದಿಗೆ ಅಪರ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಜಿಬಿಎ ಮುಖ್ಯಆಯುಕ್ತ ಮಹೇಶ್ವರ್ ರಾವ್ ಮತ್ತಿತರರು ಭಾಗವಹಿಸಿದ್ದರು.



















