ರಾಜ್ಯದ ಮಹಾನಗರ ಪಾಲಿಕೆಗಳ ನೌಕರರ ಸಂಘದ ವಿವಿಧ ಬೇಡಿಕೆಗಳ ಕುರಿತಂತೆ ಚರ್ಚಿಸಲು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರ ಅಧ್ಯಕ್ಷತೆಯಲ್ಲಿ ಜು. 15 ರಂದು ಮಧ್ಯಾಹ್ನ 12ಕ್ಕೆ ವಿಕಾಸಸೌಧದ 4ನೇ ಮಹಡಿಯಲ್ಲಿ ಸಭೆ ನಡೆಯುತ್ತಿದೆ.
ಸಭೆಗೆ ನೌಕರರ ಸಂಘದ ಸದಸ್ಯರು ಹಾಜರಾಗುವಂತೆ ನಗರಾಭಿವೃದ್ಧಿ ಇಲಾಖೆಯ ಅಪರ ಕಾರ್ಯದರ್ಶಿ ಡಾ. ನಾಗೇಂದ್ರ ಹೊನ್ನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.