ಖ್ಯಾತ ಹಿರಿಯ ನಟ, ಮೆಗಾ ಸ್ಟಾರ್ ಚಿರಂಜೀವಿ ಗಿನ್ನಿಸ್ ದಾಖಲೆ ಬರೆದಿದ್ದು, ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
ನಟ ಚಿರಂಜೀವಿ ಅವರು ಪದ್ಮವಿಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಸೆ. 22ರಂದು ‘ಭಾರತೀಯ ಚಿತ್ರರಂಗದ ಮೋಸ್ಟ್ ಪ್ರೊಫೈಲಿಕ್ ಸ್ಟಾರ್’ ಎಂದು ಪ್ರಮಾಣಪತ್ರ ನೀಡಲಾಗಿದೆ.
ಚಿರಂಜೀವಿ ಇಲ್ಲಿಯವರೆಗೂ 156 ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಳೆದ 46 ವರ್ಷಗಳಿಂದ ಅವರು ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ಚಿರಂಜೀವಿ ಅವರು 537 ಹಾಡುಗಳಲ್ಲಿ ಡ್ಯಾನ್ಸ್ ಮಾಡಿದ್ದಾರೆ. 24 ಸಾವಿರ ಡ್ಯಾನ್ಸ್ ಸ್ಟೆಪ್ಸ್ ಹಾಕಿದ್ದಾರೆ. ಈ ಸಾಧನೆಗಾಗಿ ಅವರ ಹೆಸರು ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಲ್ಲಿ ಸೇರಿಕೊಂಡಿದ್ದು, ಅವರಿಗೆ ಪ್ರಮಾಣ ಪತ್ರ ನೀಡಲಾಗಿದೆ.
ಹೈದರಾಬಾದ್ನಲ್ಲಿ ಚಿರಂಜೀವಿ ಅವರಿಗೆ ಗಿನ್ನಿಸ್ ರೆಕಾರ್ಡ್ನ ಪ್ರಮಾಣಪತ್ರ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಅಮೀರ್ ಖಾನ್ ಸೇರಿದಂತೆ ಹಲವು ದಿಗ್ಗಜರು ಇದ್ದರು. ಈ ವೇಳೆ ಮಾತನಾಡಿದ ಅಮೀರ್ ಖಾನ್, ‘ಚಿರಂಜೀವಿ ನನಗೆ ಅಣ್ಣ. ನಾನು ಅವರ ಅಭಿಮಾನಿ. ಅವರಿಗೆ ಈ ಗೌರವ ಸಿಕ್ಕಿದ್ದಕ್ಕೆ ನನಗೆ ಖುಷಿಯಾಗಿದೆ ಎಂದು ಹೇಳಿದ್ದಾರೆ.