ಬೆಂಗಳೂರು: ಮಹಿಳೆಯರಿಗಾಗಿ ಗ್ಯಾರಂಟಿ ಯೋಜನೆ (Guarantee Scheme) ಜಾರಿಗೆ ತಂದಂತೆ ಪುರುಷರಿಗೆ ಉಚಿತವಾಗಿ ವಾರಕ್ಕೆ ಎರಡು ಬಾಟಲಿ ಮದ್ಯ (Alcohol) ಕೊಡಿ ಎಂದು ತುರುವೇಕೆರೆ ಜೆಡಿಎಸ್ (JDS) ಶಾಸಕ ಎಂಟಿ ಕೃಷ್ಣಪ್ಪ (MT Krishnappa) ಮನವಿ ಮಾಡಿದ್ದಾರೆ.
ಮಹಿಳೆಯರಿಗೆ ತಿಂಗಳಿಗೆ 2,000 ರೂ. ಹಣ, ಉಚಿತ ವಿದ್ಯುತ್ ಮತ್ತು ಉಚಿತ ಬಸ್ ಪ್ರಯಾಣವನ್ನು ನೀಡುತ್ತಿದ್ದೀರಿ., ಕುಡಿಯುವವರಿಗೆ, ಪ್ರತಿ ವಾರ ಅವರಿಗೆ ಎರಡು ಬಾಟಲಿಗಳನ್ನು ಉಚಿತವಾಗಿ ನೀಡಿ. ಅವರು ಕುಡಿಯಲು ಬಿಡಿ. ನಾವು ಪುರುಷರಿಗೆ ಪ್ರತಿ ತಿಂಗಳು ಹಣ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ದುಡಿಯುವ ಕಾರ್ಮಿಕರು, ಜನರು ಮದ್ಯ ಸೇವಿಸುತ್ತಾರೆ. ಇದನ್ನು ತಪ್ಪಿಸಲು ಸಾಧ್ಯವಿಲ್ಲ. ಪುರುಷರಿಗೆ ಉಚಿತವಾಗಿ ಮದ್ಯ ವಿತರಿಸುವ ಯೋಜನೆಯನ್ನ ರಾಜ್ಯ ಸರ್ಕಾರ ತರಬೇಕು ಎಂದು ಆಗ್ರಹಿಸಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಗಳನ್ನ ಜನರಿಗೆ ಸಮರ್ಪಕವಾಗಿ ತಲುಪಿಸೋಕೆ ಸರ್ಕಾರ ಹೆಣಗಾಡುತ್ತಿದೆ. ಸರಿಯಾಗಿ ಅನ್ನಭಾಗ್ಯದ ಅಕ್ಕಿ ನೀಡಲಾಗುತ್ತಿಲ್ಲ ಎಂದು ಹೇಳಿದ್ದಾರೆ.