ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಿತ್ಯವೂ ವಿಂಡೋ ಫ್ಯಾನ್‌ಗಳ (ಪವನ ವಿದ್ಯುತ್ ಗಾಳಿ ಯಂತ್ರ) ಭಾರಿ ಶಬ್ದದಿಂದ ಸಾರ್ವಜನಿಕರಿಗೆ ತೀವ್ರ ಕಿರಿಕಿರಿಯಾಗುತ್ತಿದೆ. ಶಾಲಾ-ಕಾಲೇಜುಗಳ ಪಕ್ಕದಲ್ಲೇ ಈ ವಿಂಡೋ ಫ್ಯಾನ್‌ಗಳನ್ನು ಅಳವಡಿಸಲಾಗಿದ್ದು, ಸರ್ಕಾರಿ ಜಮೀನುಗಳನ್ನು ಸಹ ವಿಂಡೋ ಫ್ಯಾನ್ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದರಿಂದಾಗಿ ತಮಗೆ ಉಳುಮೆ ಮಾಡಲು ಜಮೀನು ಸಿಗುತ್ತಿಲ್ಲ, ಅಷ್ಟೇ ಅಲ್ಲದೆ ಅರಣ್ಯ ಪ್ರದೇಶದಲ್ಲೇ ಕಂಪನಿಯ ವಾಹನಗಳ ಸಂಚಾರಕ್ಕೆ ದಾರಿ ಮಾಡಿಕೊಂಡಿರುವುದರಿಂದ ಪ್ರಾಣಿ-ಪಕ್ಷಿಗಳಿಗೆ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ. ತಕ್ಷಣವೇ ತಾಲೂಕು ಆಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ತೀವ್ರ ಎಚ್ಚರಿಕೆ ನೀಡಿದೆ.


















