ಬೊಮ್ಮಸಂದ್ರ–ಅತ್ತಿಬೆಲೆ ಮಾರ್ಗವಾಗಿ ತಮಿಳುನಾಡಿನ ಹೊಸೂರಿಗೆ ಬೆಂಗಳೂರು ಮೆಟ್ರೋ ವಿಸ್ತರಣೆ ಮಾಡುವ ಪ್ರಸ್ತಾವನೆಗೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ತಮಿಳುನಾಡು ಮುಖ್ಯಮಂತ್ರಿ ವಿಜಯ್ ಸಲ್ಲಿಸಿರುವ ಮನವಿ ಹಿನ್ನೆಲೆಯಲ್ಲಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ.
ಕನ್ನಡಿಗರ ಹಿತಾಸಕ್ತಿ ಕಾಪಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆಗ್ರಹಿಸಿದ್ದಾರೆ. ಒಂದು ವೇಳೆ ಕನ್ನಡಿಗರ ಹಿತಾಸಕ್ತಿಯನ್ನು ಕಡೆಗಣಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.


















