ಬೆಂಗಳೂರು: ಭಾನುವಾರ ಮೆಟ್ರೋ ಪ್ರಯಾಣದಲ್ಲಿ ವಿಳಂಬವಾಗಲಿದ್ದು, ಪ್ರಯಾಣಿಕರು ಗಮನ ಹರಿಸಬೇಕಿದೆ.
ಭಾನುವಾರ ಒಂದು ಗಂಟೆ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.
ನಿಗದಿತ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ. ಭಾನುವಾರ ಬೆಳಿಗ್ಗೆ 7ರಿಂದ ಬೆಳಿಗ್ಗೆ 8ರ ವರೆಗೆ ವ್ಯತ್ಯವಾಗಲಿದೆ ಎಂದು ಹೇಳಲಾಗಿದೆ.
ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದಾಗಿ ಈ ವೇಳೆ ಸಂಚಾರ ಸ್ಥಗಿತಗೊಳಿಸಿ, ನಂತರ 8ರಿಂದ ಆರಂಭಿಸಲಾಗುವುದು. ಇನ್ನುಳಿದಂತೆ ಎಲ್ಲ ಮಾರ್ಗಗಳಲ್ಲಿ ಮೆಟ್ರೋ ಸೇವೆ ಆರಂಭವಾಗಲಿದೆ ಎನ್ನಲಾಗಿದೆ.