ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರದಿಂದ ನಿರಂತರ ಉಪಟಳ ನಡೆಯುತ್ತಿದೆ. ಇತ್ತೀಚೆಗೆ ಸೇನಾ ವಾಹನದ ಮೇಲೆ ಉಗ್ರರು ನಡೆಸಿದ್ದ ದಾಳಿ ಪ್ರಕರಣದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿ ಓರ್ವ ಸೇನಾ ಪೋರ್ಟರ್ ಗಾಯಗೊಂಡಿದ್ದಾರೆ ಎಂದು ಸೇನೆಯ ಮೂಲಗಳು ಹೇಳಿವೆ.
ಬೋಟಪತ್ರಿ ಪ್ರದೇಶದಲ್ಲಿ ಭಯೋತ್ಪಾದಕರು ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಬಟ್ಗುಂಡ್ ತ್ರಾಲ್ ಪ್ರದೇಶದಲ್ಲಿ ಭಯೋತ್ಪಾದಕರು ಕಾರ್ಮಿಕನೊಬ್ಬನ ಮೇಲೆ ಗುಂಡು ಹಾರಿಸಿ ಗಾಯಗೊಂಡ ಕೆಲವೇ ಗಂಟೆಗಳ ನಂತರ ಈ ದಾಳಿ ನಡೆದಿರುವುದರ ಕುರಿತು ವರದಿಯಾಗಿದೆ..
ಗಾಯಗೊಂಡಿರುವ ಕಾರ್ಮಿಕನನ್ನು ಉತ್ತರ ಪ್ರದೇಶದ ನಿವಾಸಿ ಪ್ರೀತಮ್ ಸಿಂಗ್ ಎನ್ನಲಾಗಿದೆ. ಇತ್ತೀಚೆಗಷ್ಟೇ ಅ. 20 ರಂದು, ಗಂದೇರ್ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ನಿರ್ಮಾಣ ಸ್ಥಳದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ, 6 ಜನ ಕಾರ್ಮಿಕರು ಹಾಗೂ ಓರ್ವ ವೈದ್ಯರನ್ನು ಬಲಿ ಪಡೆದಿದ್ದರು.