ಬೆಂಗಳೂರು : ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಹಿತಿ ನೀಡಿವೆ.

ಮೊದಲು ಮೊಣಕಾಲು ಸಂಬಂಧ ಆಪರೇಷನ್ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಮಾಹಿತಿಗಳ ಪ್ರಕಾರ, ಸುಧಾರಕರ್ ಪಾರ್ಥಿವ ಶರೀರರವನ್ನು ಕಿಮ್ಸ್ ಆಸ್ಪತ್ರೆಯಿಂದ ಹಿರಿಯೂರಿಗೆ ರವಾನೆ ಮಾಡಲಾಗುತ್ತದೆ. 8.45ಕ್ಕೆ ಬೆಂಗಳೂರಿನಿಂದ ಹಿರಿಯೂರು ತಾಲೂಕು ಕ್ರೀಡಾಂಗಣಕ್ಕೆ ಪಾರ್ಥಿವ ಶರೀರ ರವಾನಿಸಿ ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆವರೆಗೂ ಚಳ್ಳಕೆರೆ ತಾಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ.
ಇದನ್ನೂ ಓದಿ ; ಅಪಘಾತ ತಪ್ಪಿಸಲು ಹೋಗಿ ದೇವಸ್ಥಾನಕ್ಕೆ ನುಗ್ಗಿದ BMTC ಬಸ್!



















