ಬೀದರ್ : ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಕ್ಕಳ ವಾರ್ಡ್‌ನಲ್ಲಿ ವಿದ್ಯುತ್ ವ್ಯತ್ಯಯ ಹಿನ್ನೆಲೆ ಸಚಿವ ದ್ವಯರು ಭೇಟಿ ನೀಡಿದ್ದು, ಬೆಳ್ಳಂಬೆಳಿಗ್ಗೆ ಬ್ರಿಮ್ಸ್ ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ, ರೋಗಿಗಳ ಸಮಸ್ಯೆಗಳನ್ನು ಇಬ್ಬರೂ ಸಚಿವರು ಆಲಿಸಿದ್ದಾರೆ.
4ನೇ ಮಹಡಿಯ ಮಕ್ಕಳ ವಾರ್ಡ್‌ನ 3ನೇ ಯೂನಿಟ್‌ನಲ್ಲಿ ಜು.14ರಂದು ವಿದ್ಯುತ್ ವ್ಯತ್ಯಯ ಆಗುತ್ತಿರುವುದನ್ನು ಖಂಡಿಸಿ ಇತ್ತೀಚೆಗೆ ಬಿಜೆಪಿ ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಸಮಸ್ಯೆಯನ್ನು ಅರಿತು, ಶೀಘ್ರದಲ್ಲೇ ಸರಿಪಡಿಸುವಂತೆ ಸೂಚನೆ ನೀಡಿದ್ದಾರೆ.
ವಿದ್ಯುತ್ ವ್ಯತ್ಯಯ ಆಗಲಿಕ್ಕೆ ಕಾರಣ ಕೇಳಿದ ಸಚಿವರು, ಇನ್ಮುಂದೆ ವಿದ್ಯುತ್ ವ್ಯತ್ಯಯ ಆಗದಂತೆ ನಿಗಾವಹಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.
ಮಾತ್ರವಲ್ಲದೇ, ಸಮಯಕ್ಕೆ ಸರಿಯಾಗಿ ಗುಣಮಟ್ಟದ ಆಹಾರ ವಿತರಸುವಂತೆ ಬ್ರಿಮ್ಸ್ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.



















