ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ವಿರುದ್ಧ ವಿಪ ಸದಸ್ಯ ಸಿ.ಟಿ. ರವಿ(ct ravi) ಅಶ್ಲೀಲ ಪದ ಬಳಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಇಂದು ವಿಚಾರಣೆಗೆ ಯತೀಂದ್ರ ಸಿದ್ದರಾಮಯ್ಯ ಹಾಜರಾಗಲಿದ್ದಾರೆ.
ಬೆಳಗಾವಿ ಅಧಿವೇಶನದ ಕೊನೆಯ ದಿನ ವಿಧಾನ ಪರಿಷತ್(Legislative Council) ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ (B.R. Ambedkar) ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ (Amit Shah) ನೀಡಿರುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್(CONGRESS) ಹಾಗೂ ಬಿಜೆಪಿ(BJP) ಮಧ್ಯೆ ಜಟಾಪಟಿ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ರಾಹುಲ್ ಬಗ್ಗೆ ಸಿ.ಟಿ. ರವಿ ಆರೋಪ ಮಾಡಿದ್ದರು. ಇದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆ ಮಾತಿನ ಸಂಘರ್ಷದ ಭರದಲ್ಲಿ ಸಿ.ಟಿ. ರವಿ ಅಶ್ಲೀಲ ಪದ(obscene word) ಬಳಕೆ ಮಾಡಿದ್ದಾರೆಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು.
ನಂತರ ಈ ವಿಚಾರ ದೊಡ್ಡ ರಾಜಕೀಯ ಗೊಂದಲಕ್ಕೆ ಕಾರಣವಾಯಿತು. ಪೊಲೀಸರು(police) ಸಿ.ಟಿ. ರವಿಯನ್ನು ಅರೆಸ್ಟ್ ಮಾಡಿ ಕೋರ್ಟ್ ಗೆ ಹಾಜರು ಪಡಿಸಿದ್ದರು. ಕೋರ್ಟ್ ಜಾಮೀನು ನೀಡಿತ್ತು. ಪ್ರಕರಣವನ್ನು ಸರ್ಕಾರ, ಸಿಐಡಿಗೆ ವಹಿಸಿದ್ದು, ಸಿಐಡಿ ತನಿಖೆ ಕೈಗೊಂಡಿದೆ. ಈಗಾಗಲೇ ಆರೋಪಿತ ಸಿ.ಟಿ. ರವಿಗೂ ನೋಟಿಸ್(notice) ನೀಡಲಾಗಿದೆ.
ಸಾಕ್ಷಿದಾರರು ತನಿಖೆಗೆ ಸಹಕರಿಸುತ್ತಿದ್ದು, ಒಬ್ಬೊಬ್ಬರೇ ಹೋಗಿ ತಮ್ಮ ಹೇಳಿಕೆ ದಾಖಲಿಸುತ್ತಿದ್ದಾರೆ.
ಇಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯತೀಂದ್ರ ಸಿದ್ದರಾಮಯ್ಯ ವಿಚಾರಣೆ ಎದುರಿಸುತ್ತಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಸಿಐಡಿ ಕಚೇರಿಗೆ (CID Office)ತೆರಳಿ ವಿಚಾರಣೆ ಎದುರಿಸಲಿದ್ದಾರೆ.