ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೋಗುತ್ತಿದ್ದ ಕಾರು ಅಪಘಾತವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು(Kitturu) ತಾಲೂಕಿನ ಅಂಬಡಗಟ್ಟಿ ಹತ್ತಿರ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಹೋದರ ಚನ್ನರಾಜ ಹಟ್ಟಿಹೊಳಿ(Channaraja Hattiholi) ಅಪಾಯದಿಂದ ಬಚಾವ್ ಆಗಿದ್ದಾರೆ.
ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ನಾಯಿ(dog) ಅಡ್ಡ ಬಂದಿದ್ದನ್ನ ತಪ್ಪಿಸಲು ಹೋಗಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ನುಜ್ಜಗುಜ್ಜಾಗಿದೆ. ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು(police) ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.