ಕೇಂದ್ರ ಸರ್ಕಾರದ ಎಲ್ಲಾ ಕೆಲಸಗಳು ಕೇವಲ ಪ್ರಚಾರದ ಗಿಮಿಕ್ ಅಷ್ಟೇ ಎಂದು ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ರಾಜ್ಯ ಪ್ರವಾಸದ ಬಗ್ಗೆ ಅವರು ಈ ಆರೋಪ ಮಾಡಿದ್ದಾರೆ.
ಮೆಟ್ರೋಗಾಗಿ ಕೇಂದ್ರ ಸರ್ಕಾರ ಎಷ್ಟು ಹಣ ನೀಡಿದೆ ಎಂಬುದರ ಬಗ್ಗೆ ಒಂದು ಶ್ವೇತಪತ್ರ ಹೊರಡಿಸಲಿ ಎಂದು ಸವಾಲು ಹಾಕಿದ್ದಾರೆ. ಪ್ರಾಮಾಣಿಕತೆ ಇದ್ದರೆ ದಾಖಲೆಗಳನ್ನು ನೀಡಲಿ ಎಂದು ಒತ್ತಾಯಿಸಿದ್ದಾರೆ.
ತೇಜಸ್ವಿ ಸೂರ್ಯ ಅವರಿಗೆ ಕೇಂದ್ರ ಸರ್ಕಾರದ ಬಗ್ಗೆ ಏನೂ ತಿಳಿದಿಲ್ಲ ಎಂದು ಲಾಡ್ ವ್ಯಂಗ್ಯವಾಡಿದ್ದಾರೆ. ರಾಜ್ಯ ದಿವಾಳಿಯಾಗಿದೆ ಎನ್ನುವವರು ಮೊದಲು ಗುಜರಾತ್ ಮೇಲಿರುವ ಸಾಲದ ಬಗ್ಗೆ ತಿಳಿಸಲಿ ಎಂದಿದ್ದಾರೆ.


















