ಬೆಂಗಳೂರು: ಸಚಿವರ ಹನಿಟ್ರ್ಯಾಪ್‌ಗೆ ಯತ್ನಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಬಾಂಬ್ ಸಿಡಿಸಿದ್ದಾರೆ.
ಹನಿಟ್ರ್ಯಾಪ್ (Honeytrap) ಪ್ರಯತ್ನದ ಬಗ್ಗೆ ಮಾತನಾಡಿರುವ ಸಚಿವರು, ಸಚಿವರ ಮೇಲೆ ಎರಡು ಸಲ ಹನಿ ಟ್ರ್ಯಾಪ್ ಆಗಿದೆ. ಕೆಲವರು ಅದನ್ನೇ ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ. ಸಂಬಂಧಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೀನಿ. ಇದಕ್ಕೆ ಕಡಿವಾಣ ಹಾಕಬೇಕು. ಇದರಲ್ಲಿ ನಮ್ಮವರು ಅಷ್ಟೇ ಅಲ್ಲ, ಬೇರೆ ಪಕ್ಷದ ನಾಯಕರು ಹನಿ ಟ್ರ್ಯಾಪ್ ನಲ್ಲಿ ಸಿಲುಕಿದ್ದಾರೆ. ಇಂತಹ ಪ್ರಕರಣಗಳು ಇಲ್ಲಿಗೆ ನಿಲ್ಲಬೇಕು ಎಂದು ಹೇಳಿದ್ದಾರೆ.