ಬೆಂಗಳೂರು: ಅಪ್ಪಂಗೆ ಹುಟ್ಟಿದ್ದರೆ ರಾಜೀನಾಮೆ ಸಲ್ಲಿಸಿ, ಚುನಾವಣೆಗೆ ಬಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ ಬೆನ್ನಲ್ಲೇ ಶಿವಾನಂದ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಮೂಲಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸಚಿವ ಶಿವಾನಂದ್ ಪಾಟೀಲ್ ಸ್ವೀಕರಿಸಿದ್ದಾರೆ. ಸ್ಪೀಕರ್ ಖಾದರ್ ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಅಲ್ಲದೇ, ಶಾಸಕ ಯತ್ನಾಳ್ ಗೂ ರಾಜೀನಾಮೆ ಸಲ್ಲಿಸಿ, ಬಸವನ ಬಾಗೇವಾಡಿಯಲ್ಲಿ ಸ್ಪರ್ಧೆ ಮಾಡುವಂತೆ ಸವಾಲು ಹಾಕಿದ್ದಾರೆ.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ವಿಜಯಪುರ ಮತ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿ ನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.
ಆದುದರಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಯತ್ನಾಳ್ ಗೆ ಸವಾಲು ಹಾಕಿದ್ದಾರೆ.