ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ಕೆಲ ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ಇತ್ತಿಚೇಗಷ್ಟೇ ಸುರ್ಜೇವಾಲ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಕ್ಕೆ ಕೆಲವು ಸಚಿವರು ಬೇಸರ ಹೊರಹಾಕಿದ್ದಾರೆ.
ಪಕ್ಷದಲ್ಲಿ ಸುರ್ಜೇವಾಲ ಅನಗತ್ಯವಾಗಿ ಹಸ್ತಕ್ಷೇಪ ಮಾಡ್ತಿದ್ದಾರೆ ಎಂದು ಕೆಲವರು ಗರಂ ಆಗಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇರುವಾಗ ಮತ್ತೊಬ್ಬರು ಯಾಕೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬೇಕು..? ಒಂದ್ವೇಳೆ ಪರಿಸ್ಥಿತಿ ಹೀಗೆ ಮುಂದುವರದ್ರೆ ಕಷ್ಟ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಸುರ್ಜೇವಾಲ ಬಗ್ಗೆ ನೀವು ಹೈಕಮಾಂಡ್ ನಾಯಕರ ಗಮನಕ್ಕೆ ತರಬೇಕು ಎಂದು ಸಿದ್ದರಾಮಯ್ಯಗೆ ಆಪ್ತರು ದೂರು ನೀಡಿದ್ದಾರೆ.



















