ಬೆಂಗಳೂರು : ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ 12 ಹುದ್ದೆಗಳ ನೇಮಕಾತಿಗಾಗಿ (Ministry of Defence Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 12 ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ವಿಧಾನ ಸೇರಿ ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಕ್ಷಣಾ ಸಚಿವಾಲಯ
ಒಟ್ಟು ಹುದ್ದೆಗಳು: 12
ಹುದ್ದೆಗಳ ಹೆಸರು: ಗ್ರೂಪ್ ಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 21
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ದೆಹಲಿ ಹಾಗೂ ಜೈಪುರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 56,900 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ mod.gov.in ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಭರ್ತಿ ಮಾಡಿ
ಅಗತ್ಯ ದಾಖಲೆಗಳೊಂದಿಗೆ ಅಧಿಸೂಚನೆಯಲ್ಲಿ ತಿಳಿಸಿದ ವಿಳಾಸಕ್ಕೆ ಪೋಸ್ಟ್ ಮಾಡಿ
ಇದನ್ನೂ ಓದಿ : ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್



















