ಬೆಂಗಳೂರು : ಕೇಂದ್ರ ಸರ್ಕಾರದ ವಿದೇಶಾಂಗ ಸಚಿವಾಲಯದಲ್ಲಿ (Ministry of External Affairs Recruitment 2026) ಖಾಲಿ ಇರುವ 2 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಎರಡು ಅಂಡರ್ ಸೆಕ್ರೆಟರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು ಎಂಬುದರ ಮಾಹಿತಿ ಇಲ್ಲಿದೆ.
ಹುದ್ದೆಯ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ವಿದೇಶಾಂಗ ಸಚಿವಾಲಯ
ಹುದ್ದೆಗಳ ಹೆಸರು: ಅಂಡರ್ ಸೆಕ್ರೆಟರಿ
ಒಟ್ಟು ಹುದ್ದೆಗಳು: 02
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 30
ಉದ್ಯೋಗ ಸ್ಥಳ: ನವದೆಹಲಿ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎ ಎಲ್ ಎಲ್ ಬಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ mea.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಇಲ್ಲವೇ, ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಯನ್ನು aopa3@mea.gov.in ಗೆ ಮೇಲ್ ಮಾಡಿದರೂ ಸಾಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Aditya Kumar Bhati Administrative Officer (PA-III) Room No. 4093, Block-B Jawaharlal Nehru Bhawan New Delhi – 110001.
ಇದನ್ನೂ ಓದಿ : ಭಾರತದಲ್ಲಿ ‘ವಿನ್ಫಾಸ್ಟ್’ ಕಾರಿನ ಬುಕಿಂಗ್ ಆರಂಭ!



















