ಬೆಂಗಳೂರು : ಕೇಂದ್ರ ಗೃಹ ಸಚಿವಾಲಯ ಹಾಗೂ ಅದರ ಕಚೇರಿಗಳಲ್ಲಿ ಖಾಲಿ ಇರುವ 23 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಡೈರೆಕ್ಟರ್ ಸೇರಿ 23 ಹಲವು ಹುದ್ದೆಗಳನ್ನು ಭರ್ತಿ (Ministry of Home Affairs Recruitment 2026) ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಕರ್ನಾಟಕದ ಬೆಂಗಳೂರಿನಲ್ಲಿಯೇ ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ಗೃಹ ಸಚಿವಾಲಯ
ಒಟ್ಟು ಹುದ್ದೆಗಳು: 23
ಹುದ್ದೆಗಳ ಹೆಸರು: ಡೈರೆಕ್ಟರ್ ಇತ್ಯಾದಿ
ಉದ್ಯೋಗ ಸ್ಥಳ: ನವದೆಹಲಿ, ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 20
ಒಂದು ಡೈರೆಕ್ಟರ್, 5 ಡೆಪ್ಯೂಟಿ ಡೈರೆಕ್ಟರ್ ಹಾಗೂ 17 ಅಸಿಸ್ಟಂಟ್ ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 54 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 47,600 ರೂಪಾಯಿಯಿಂದ 2.15 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲು mha.gov.inವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಪೋಸ್ಟ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Under Secretary (Estt.), NATGRID, Ministry of Home Affairs, 1, Andheria Mor, Vasant Kunj Road, New Delhi-1 10074.
ಇದನ್ನೂ ಓದಿ : ಅಮೆರಿಕ, ಇಸ್ರೇಲ್ ವಾದವನ್ನು ಸುಳ್ಳು ಮಾಡಿದ ಇರಾನ್ – ಕ್ಷಿಪಣಿ ದಾಳಿ ಇಳಿಕೆ ಹಿಂದಿದೆಯಂತೆ ರಣತಂತ್ರ!



















