ಗದಗ: ಪ್ರೀತಿಯ ಹೆಸರಿನಲ್ಲಿ ಅಪ್ರಾಪ್ತ ಬಾಲಕರು ಕಿರುಕುಳ ನೀಡಿದ್ದಕ್ಕೆ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ.
ಜಿಲ್ಲೆಯ ಗಜೇಂದ್ರಗಡದ ಬಣಗಾರ( Gajendragad)ಕಾಲೋನಿಯಲ್ಲಿ ಈ ಘಟನೆ ನಡೆದಿದೆ. 9ನೇ ತರಗತಿಯಲ್ಲಿ ಓದುತ್ತಿದ್ದ ಖುಷಿ ಆತ್ಮಹತ್ಯೆಗೆ ಶರಣಾಗಿರುವ ಬಾಲಕಿ ಎನ್ನಲಾಗಿದೆ. ಖುಷಿ ಓದುತ್ತಿದ್ದ ಶಾಲೆಯಲ್ಲೇ ಇಬ್ಬರು ಅಪ್ರಾಪ್ತರು ಅವಳ ಹಿಂದೆ ಬಿದ್ದಿದ್ದಾರೆ. ಪ್ರತಿ ದಿನ ಪ್ರೀತಿಸು ಎಂದು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಹೀಗಾಗಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪಾಲಕರು ಆರೋಪಿಸಿದ್ದಾರೆ.
ಬಾಲಕಿಯ ಸಾವು ಖಂಡಿಸಿ ಎಸ್ ಎಸ್ ಕೆ ಸಮಾಜ ವ್ಯಾಪಾರ ವಹಿವಾಟು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖುಷಿ ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲವ್ ಜಿಹಾದ್ಗೆ ಬಲಿಯಾಗಿರುವ ಸಂಶಯವಿದೆ. ಹೀಗಾಗಿ ಈ ಕುರಿತು ತನಿಖೆ ನಡೆಸಬೇಕೆಂದು ಆಗ್ರಹಿಸಲಾಗಿದೆ. ಈ ಕುರಿತು ಗಜೇಂದ್ರಗಡ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.