ನೆಲಮಂಗಲ: ಖಾಸಗಿ ಶಾಲೆಯ ಮಾಲೀಕ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮಾಲೀಕ ಈರತ್ತಯ್ಯ(50) ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ವರು ವಿದ್ಯಾರ್ಥಿನಿಯರನ್ನು ಶಾಲೆಯ ಕೊಠಡಿಗೆ ಕರೆಸಿದ್ದ ಮಾಲೀಕ, ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಕುರಿತು ಪೊಲೀಸರು ಮತ್ತು ಬೆಂಗಳೂರು ಉತ್ತರ ತಾಲೂಕಿನ ಬಿಇಒ ತಾರನಾಥ್ ಅವರಿಗೆ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಶಾಲೆಯ ಹತ್ತಿರ ಪೋಷಕರು ತೆರಳಿ ಪ್ರತಿಭಟನೆ ನಡೆಸಿದ್ದಾರೆ.