ಹಾಸನ: ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ ಘಟನೆ ಜಿಲ್ಲೆಯ ಬೇಲೂರಿನ ಪುರಸಭೆ ಆವರಣದ ಶ್ರೀವರಸಿದ್ಧಿ ವಿನಾಯಕ ದೇಗುಲದಲ್ಲಿ ನಡೆದಿದೆ. ಎರಡು ಚಪ್ಪಲಿಗಳಿಗೆ ದಾರ ಕಟ್ಟಿ ಹಾರದಂತೆ ಕೀಚಕರು ಹಾಕಿದ್ದಾರೆ.

ಕಿಡಿಗೇಡಿಗಳ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು. ದೇವಾಲಯದ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಜನ ಸ್ಥಳೀಯರು ಭಾಗಿಯಾಗಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.